ಉಡುಪಿ: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ.
ಇರ್ಷಾದ್ (56) ಮೃತರು. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
ಉಡುಪಿ ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಮೇಲೆ ಗೊತ್ತಾಗದೇ ಕಾಲಿಟ್ಟ ಇರ್ಷಾದ್ ಕರೆಂಟ್ ಶಾಕ್‌ನಿಂದಾಗಿ ಮೃತಪಟ್ಟಿದ್ದಾರೆ.