ಉಡುಪಿ: ಪತ್ನಿಯನ್ನು ಕೊಲೆಗೈದ ಪತಿ

Prasthutha|

ಉಡುಪಿ: ಪತ್ನಿಯನ್ನು ಪತಿ ಕೊಲೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡದಲ್ಲಿ ನಡೆದಿದೆ.

- Advertisement -


ಬೀದರ್ ದೊಣಗಪುರ ಮೂಲದ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆ ನಿವಾಸಿ ಜಯಶ್ರೀ(31) ಕೊಲೆಗೀಡಾದ ಮಹಿಳೆ.


ಕೊಲೆ ಆರೋಪಿ ಆಕೆಯ ಪತಿ ಕಿರಣ್ ಉಪಾಧ್ಯ ಗುಂಡ್ಮಿ(44) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

- Advertisement -


ಕಿರಣ್ ಕಳೆದ ಎರಡು ವರ್ಷಗಳಿಂದ ನರಸಿಂಹ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ. ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.



Join Whatsapp