ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂರು ಮಕ್ಕಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಡಿ.30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಸರು ಆದೇಶಿಸಿದ್ದಾರೆ.
ಡಿ.5ರಂದು ನ್ಯಾಯಾಲಯ ಡಿ.18ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿತ್ತು. ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶೆ Dewa ಅವರ ಮುಂದೆ ಹಾಜರುಪಡಿಸಲಾಗಿತ್ತು.
ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದ್ದಾರೆ.