ಉಡುಪಿ: ನೇಜಾರಿನಲ್ಲಿ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಕಿರುಕುಳದಿಂದ ಐನಾಝ್, ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿದ್ದಳು ಎಂದು ಮೃತ ಐನಾಝ್ ಸಹೋದರ ಅಸಾದ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತನ ಕಿರುಕುಳದ ಬಗ್ಗೆ ಮನೆಯಲ್ಲೂ ಹೇಳಿರಲಿಲ್ಲ. ಈ ವಿಚಾರ ಹೇಳುತ್ತಿದ್ದರೆ ತಂದೆ ಅವಳನ್ನು ಕೆಲಸಕ್ಕೆ ಹೋಗಬೇಡ ಎನ್ನುತ್ತಾರೆಂಬ ಭಯ ಅವಳಿಗಿತ್ತು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮಹಿಳೆಯರು ಮುಂದೆ ಬರುತ್ತಿದ್ದಾರೆ. ಆದುದರಿಂದ ಅವರಿಗೆ ಭದ್ರತೆ ಬೇಕು. ಅವರಿಗೆ ಯಾರಾದರೂ ಕಿರುಕುಳ ನೀಡಿದರೆ ಮಾಹಿತಿ ಕೊಡುವ ವ್ಯವಸ್ಥೆ ಬರಬೇಕು ಎಂದು ತಿಳಿಸಿದ್ದಾರೆ.