ಉಡುಪಿ ಕಗ್ಗೊಲೆ ಪ್ರಕರಣ | ಪ್ರವೀಣ್ ಕಿರುಕುಳಕ್ಕೆ ಐನಾಝ್ ನಂಬರ್ ಬ್ಲಾಕ್ ಮಾಡಿದ್ದಳು: ಸಹೋದರ ಅಸಾದ್

Prasthutha|

ಉಡುಪಿ: ನೇಜಾರಿನಲ್ಲಿ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಕಿರುಕುಳದಿಂದ ಐನಾಝ್, ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿದ್ದಳು ಎಂದು ಮೃತ ಐನಾಝ್ ಸಹೋದರ ಅಸಾದ್ ತಿಳಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತನ ಕಿರುಕುಳದ ಬಗ್ಗೆ ಮನೆಯಲ್ಲೂ ಹೇಳಿರಲಿಲ್ಲ. ಈ ವಿಚಾರ ಹೇಳುತ್ತಿದ್ದರೆ ತಂದೆ ಅವಳನ್ನು ಕೆಲಸಕ್ಕೆ ಹೋಗಬೇಡ ಎನ್ನುತ್ತಾರೆಂಬ ಭಯ ಅವಳಿಗಿತ್ತು ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಮಹಿಳೆಯರು ಮುಂದೆ ಬರುತ್ತಿದ್ದಾರೆ. ಆದುದರಿಂದ ಅವರಿಗೆ ಭದ್ರತೆ ಬೇಕು. ಅವರಿಗೆ ಯಾರಾದರೂ ಕಿರುಕುಳ ನೀಡಿದರೆ ಮಾಹಿತಿ ಕೊಡುವ ವ್ಯವಸ್ಥೆ ಬರಬೇಕು ಎಂದು ತಿಳಿಸಿದ್ದಾರೆ.