ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ

Prasthutha|

ಉಡುಪಿ: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

- Advertisement -


ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಏರ್ ಹೋಸ್ಟೆಸ್ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಆರೋಪಿ ಪ್ರವೀಣ್ ಅರುಣ್ ಚೌಗಲೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ.


ಪ್ರಕರಣದಲ್ಲಿ ಜೈಲುಪಾಲಾಗಿರುವ ಆರೋಪಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ, ಜಾಮೀನು ಅರ್ಜಿ ವಜಾಗೊಳಿಸಿದೆ.

Join Whatsapp