ಮುಸ್ಲಿಂ ಹುಡುಗಿಯನ್ನು ಮದುವೆಯಾಗಿರುವ ಶಂಕಿತ ಹಂತಕ ಪ್ರವೀಣ್

Prasthutha|

ಉಡುಪಿ: ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ಆರೋಪಿ ಪ್ರವೀಣ್ ಅರುಣ್ ಚೌಗಲೆ ಈಗಾಗಲೇ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಸದ್ಯ ಆಕೆ ಹಿಂದೂ ಹೆಸರಿನಲ್ಲಿ ಗುರುತಿಸಿಕೊಂಡಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರವೀಣ್ ಚೌಗಲೆ ಕುಟುಂಬ ಮಂಗಳೂರಿನಲ್ಲಿ ವಾಸ ಇದೆ ಎಂದು ಪೊಲೀಸರ ಮಾಹಿತಿ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

- Advertisement -

ನೇಜಾರುವಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಈ ಹಿಂದೆ ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿರುವುದು ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ. ಏರ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿ ಏರ್ ಇಂಡಿಯಾದಲ್ಲಿ ಕ್ಯಾಬಿನ್ ಸಿಬ್ಬಂದಿ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು.  ಈತನಿಗೆ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿದ್ದ ಐನಾಝ್ ಅವರ ಪರಿಚಯವಾಗಿತ್ತು ಎಂದು ತಿಳಿದು ಬಂದಿದೆ.



Join Whatsapp