Home ಟಾಪ್ ಸುದ್ದಿಗಳು ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ.

ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Join Whatsapp
Exit mobile version