ಉಡುಪಿ ಹತ್ಯಾಕಾಂಡ: ಪ್ರವೀಣ್ ಚೌಗುಲೆ ಪರೋಲ್ ಅರ್ಜಿ ತಿರಸ್ಕೃತ

Prasthutha|

- Advertisement -

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿದೆ‌

ನಿಧನರಾದ ತನ್ನ ಸಹೋದರ ನಿತೀನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ಗಂಟೆ ಭಾಗವಹಿಸಲು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಫೆ.8ರಂದು ಅರ್ಜಿ ಸಲ್ಲಿಸಲಾಗಿತ್ತು.

- Advertisement -

ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದಾರೆ‌.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶೆ ದೀಪಾ, ಆರೋಪಿಯ ಪರೋಲ್ ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದರು.



Join Whatsapp