Home ಟಾಪ್ ಸುದ್ದಿಗಳು ಉಡುಪಿ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದ ರಘುಪತಿ ಭಟ್

ಉಡುಪಿ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದ ರಘುಪತಿ ಭಟ್

ಉಡುಪಿ: ರಾಜ್ಯಾದ್ಯಂತ ದ್ವಿತೀಯ ಪರೀಕ್ಷೆ ಆರಂಭಗೊಂಡಿದ್ದು, ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕರ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ವಿರುದ್ಧ ಆಕ್ರೋಶ ಹೊರ ಹಾಕಿದ ಅವರು, ಇದೊಂದು ಷಡ್ಯಂತ್ರ ಅನ್ನುವುದು ಸಾಬೀತಾಗಿದೆ. ನಿನ್ನೆ ಸಂಜೆಯವರೆಗೆ ಫೋನ್ ಮಾಡಿ ಹಾಲ್ ಟಿಕೆಟ್ ಪಡೆಯಲು ಹೇಳಲಾಗಿತ್ತು. ಬೆಳಗ್ಗಿನವರೆಗೂ ಹಾಲ್ ಟಿಕೆಟ್ ಪಡೆಯಲು ಬರಲಿಲ್ಲ. ಇಂದು ಬೆಳಗ್ಗೆ 9.30ಕ್ಕೆ ಕಾಲೇಜಿಗೆ ಬಂದವರಿಗೆ ಹಿಜಾಬ್ ತೆಗೆದಿಟ್ಟು ಹೋದರೆ ಮಾತ್ರ ಹಾಲ್ ಟಿಕೆಟ್ ಕೊಡುವುದಾಗಿ ಪ್ರಾಂಶುಪಾಲರು ಹೇಳಿದ್ದರಿಂದ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡದುಕೊಂಡು ಹೋಗಿದ್ದಾರೆ. ಆದರೆ ಬಳಿಕ ಪರೀಕ್ಷಾ ಕೇಂದ್ರಕ್ಕೆ ಹೋಗಿ ಡ್ರಾಮಾ ಮಾಡಿದ್ದಾರೆ ಎಂದರು.

ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜೊತೆ ಮಾತನಾಡಿದ್ದೇನೆ. ನಾಳೆ ಮತ್ತೆ ಹಿಜಾಬ್ ಧರಿಸಿ ಬಂದರೆ ನ್ಯಾಯಾಂಗ ನಿಂದನೆ ಕೇಸು ದಾಖಲಿಸಲು ಹೇಳಿದ್ದೇನೆ. ಅಲ್ಲದೆ, ಯಥಾ ಪ್ರಕಾರ ಮುಂದುವರೆದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಹೇಳಿದರು.

Join Whatsapp
Exit mobile version