Home ಟಾಪ್ ಸುದ್ದಿಗಳು ಉಡುಪಿ: ನಾಲ್ಕು ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಉಡುಪಿ: ನಾಲ್ಕು ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ ಘೋಷಣೆ


ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ಮಳೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆಯನ್ನು ತಾಲ್ಲೂಕಿನ ತಹಸಿಲ್ದಾರ್ ಘೋಷಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ-ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಗುರುವಾರ(ಜು.25ರಂದು) ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ ಮಾಡಲಾಗಿದೆ.
ಹಾಸನ, ಆಲೂರು, ಸಕಲೇಶಪು ಮತ್ತು ಬೇಲೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ಗುರುವಾರ ರಜೆ ಘೋಷಿಸಿ ಡಿಡಿಪಿಐ ಎಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version