ಉಡುಪಿ: ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದಾರೆ.
ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ( ಮೇ.20) ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದರು.