ಉಡುಪಿ: ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ಜುಲೈ8,9 ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಶುಕ್ರವಾರ, ಶನಿವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.