ಉಡುಪಿ | ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

Prasthutha|

ಬೆಳಗಾವಿ: ಉಡುಪಿಯಲ್ಲಿ ಗುರುವಾರ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಅಪರಿಚಿತ ವ್ಯಕ್ತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಉಡುಪಿ ಎಸ್ಪಿ ಡಾ. ಅರುಣ್ ಕೆ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ಅವರಿಗೆ ಸೂಚಿಸಿದ್ದಾರೆ.

- Advertisement -

ಅಪಘಾತದಿಂದ ಗಾಯಗೊಂಡು ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಕೂಡಲೇ ಬಂಧಿಸಬೇಕು ಮತ್ತು ಈ ಆಘಾತದ ಸಮಯದಲ್ಲಿ ಬಾಲಕಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಬೇಕು ಎಂದು ಸೂಚಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದು, ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಬಳಿಕ ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಆರೋಪಿಯ ಕೃತ್ಯವನ್ನು ಕಂಡ ಸ್ಥಳೀಯರು ಆತನನ್ನು ಹಿಡಿಯಲು ಮುಂದಾಗಿದ್ದಾರೆ. ಆದರೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.



Join Whatsapp