ಉಡುಪಿ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್

Prasthutha|

ಉಡುಪಿ: ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಯವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಜ್ಜರಕಾಡು ಎಂಬಲ್ಲಿ ನಡೆದಿದೆ.

- Advertisement -

ಬಂಧಿತ ಆರೋಪಿಯನ್ನು ಅಂಬಲಪಾಡಿಯ ನೀಲಗಾಮ (26) ಎಂದು ಗುರುತಿಸಲಾಗಿದೆ.

ಅಜ್ಜರಕಾಡು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಮುಗಿಸಿ ಮನೆಗೆ ಹೋಗಲು ಬಸ್ ಕಾಯುತ್ತಿದ್ದ ವೇಳೆ ಬಂದ ನೀಲಗಾಮ ಏಕಾಏಕಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

- Advertisement -

ತಕ್ಷಣವೇ ನೆರದ ಸಾರ್ವಜನಿಕರು ಆತನನ್ನು ಹಿಡಿದು ಗೂಸಾ ಕೊಟ್ಟು ಪೊಲೀಸರಿಗೊಪ್ಪಿಸಿದ್ದಾರೆ. ಈ ಬಗ್ಗೆ ಉಡುಪಿ ಮಹಿಳಾ ಪೋಲೀಸ್ ಠಾಣಾ ನಿರೀಕ್ಷಕ  ಜಯಂತ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಎಂದು ತಿಳಿದು ಬಂದಿದೆ.



Join Whatsapp