Home ಕರಾವಳಿ ಉಡುಪಿ | 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಗದರಿದ ಪ್ರಿನ್ಸಿಪಾಲ್: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ | 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಗದರಿದ ಪ್ರಿನ್ಸಿಪಾಲ್: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂತು ಎಂದು ಪ್ರಿನ್ಸಿಪಾಲ್ ಬೈದದಕ್ಕೆ ಮನನೊಂದ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆ ಪೆರ್ಡೂರಿನ ಮನೆಯೊಂದರಲ್ಲಿ ನಡೆದಿದೆ.


ಹೆಬ್ರಿಯಲ್ಲಿರುವ ಎಸ್ ಆರ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೃಪ್ತಿ (೧೭) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಉನ್ನತ ಶ್ರೇಣಿಯಲ್ಲಿ ಪಾಸಾಗಿ ಉಚಿತ ಸೀಟ್ ಪಡೆದಿದ್ದ ವಿದ್ಯಾರ್ಥಿನಿಗೆ ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂತು ಎಂದು ಪ್ರಿನ್ಸಿಪಾಲ್ ಬೈದಿದ್ದಾರೆ ಎನ್ನಲಾಗ್ತಿದೆ. ಈ ಮಾತಿನಿಂದ ಬೇಸರಗೊಂಡ ವಿದ್ಯಾರ್ಥಿನಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version