Home ಕರಾವಳಿ ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ | ಸಂತ್ರಸ್ತ ಮೀನುಗಾರ ಕುಟುಂಬಗಳಗೆ ತಲಾ 10 ಲಕ್ಷ...

ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ | ಸಂತ್ರಸ್ತ ಮೀನುಗಾರ ಕುಟುಂಬಗಳಗೆ ತಲಾ 10 ಲಕ್ಷ ರೂ. ಪರಿಹಾರ ವಿತರಣೆ

ಉಡುಪಿ : ಕಳೆದ 2018ರ ಡಿಸೆಂಬರ್ ನಲ್ಲಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ ಏಳು ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿತರಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಚೆಕ್ ಗಳನ್ನು ವಿತರಿಸಿದರು.

ಮಲ್ಪೆ ಬಂಡರಿನಿಂದ ಸುವರ್ಣ ತ್ರಿಭುಜ ಬೋಟ್ ನ ಮಾಲಕ ಸಹಿತ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದವರು ಮರಳಿ ಬಾರದೆ ನಾಪತ್ತೆಯಾಗಿದ್ದರು. ಮೀನುಗಾರರ ದಿಢೀರ್ ನಾಪತ್ತೆ ಅವರ ಕುಟುಂಬಕ್ಕೆ ಆರ್ಥಿಕ ಸಂಕಷ್ಟವನ್ನುಂಟು ಮಾಡಿತ್ತು.

ಹೀಗಾಗಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಉಡುಪಿ ಶಾಸಕರು ಒತ್ತಾಯಿಸಿದ್ದರು. ಇದೇ ಸಂದರ್ಭ ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಿ, ಮತ್ಸ್ಯ ಸಿರಿ, ಸಾಗರೋತ್ಪನ್ನ ಖಾದ್ಯಗಳ ಬಿಡುಗಡೆ ಮಾಡಿದರು. ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್. ಅಶೋಕ್, ಶಾಸಕ ಕುಮಾರ್ ಬಂಗಾರಪ್ಪ, ಮೀನುಗಾರಿಕಾ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ನಿರ್ದೇಶಕ ರಾಮಾಚಾರ್ಯ ಮುಂತಾದವರು ಉಪಸ್ಥಿತರಿದ್ದರು.   

Join Whatsapp
Exit mobile version