Home ಕರಾವಳಿ ಉಡುಪಿ: ಟೋಲ್ ನಲ್ಲಿ ಪಲ್ಟಿಯಾದ ಆ್ಯಂಬುಲೆನ್ಸ್: ಮೂವರು ಸಾವು

ಉಡುಪಿ: ಟೋಲ್ ನಲ್ಲಿ ಪಲ್ಟಿಯಾದ ಆ್ಯಂಬುಲೆನ್ಸ್: ಮೂವರು ಸಾವು

ಉಡುಪಿ: ಆ್ಯಂಬುಲೆನ್ಸ್ ವೊಂದು ಟೋಲ್ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ಬಳಿ ಬುಧವಾರ ನಡೆದಿದೆ.


ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಆ್ಯಂಬುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಒಬ್ಬರು ಮಹಿಳೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶಿರೂರು ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp
Exit mobile version