ಉಡುಪಿ: ರೈಲು ಹಳಿಯ ವಿದ್ಯುತ್ ಕಂಬದ ಮೇಲೆ ಕುಸಿದ ಮರ: ಹಲವು ರೈಲುಗಳ ಸಂಚಾರ ವ್ಯತ್ಯಯ

Prasthutha|

ಉಡುಪಿ: ರೈಲು ಹಳಿಯ ವಿದ್ಯುತ್ ಕಂಬದ ಮೇಲೆ ಮರ ಕುಸಿದು ಬಿದ್ದ ಘಟನೆ ಉಡುಪಿಯ ಬಾರ್ಕೂರು ಬಳಿ ನಡೆದಿದೆ. ಪರಿಣಾಮವಾಗಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಎರಡು ಗಂಟೆಯಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ನಿಜಾಮುದ್ದೀನ್ – ತಿರುವನಂತಪುರ ಎಕ್ಸ್​​​ಪ್ರೆಸ್ ರೈಲು ಸಂಚಾರ ಸ್ಥಗಿತವಾಗಿದೆ. ಅದೇ ರೀತಿ, ದೆಹಲಿ – ಕೇರಳ ನಡುವೆ ಸಂಚರಿಸುವ ರೈಲು ಪ್ರಯಾಣವೂ ಸ್ಥಗಿತಗೊಂಡಿದೆ.

- Advertisement -

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಎರಡು ಗಂಟೆಯಿಂದ ಸ್ಥಗಿತವಾಗಿದೆ. ಮರ ತೆರವು, ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರ ತಹಶೀಲ್ದಾರ್​ಗೆ ನೀಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ತಹಶೀಲ್ದಾರ್​ಗಳಿಗೆ ಸೂಚನೆ ನೀಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ರಜೆ ನೀಡುವ ಅಧಿಕಾರ ನೀಡಿ ಜಿಲ್ಲಾಧಿಕಾರಿ ಡಾ. ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

Join Whatsapp