ಉಡುಪಿ: ಮಲ್ಪೆಯಲ್ಲಿ ಮಹಿಳೆ, ಮಕ್ಕಳು ಸೇರಿ ನಾಲ್ವರ ಭೀಕರ ಹತ್ಯೆ

Prasthutha|

ಮಲ್ಪೆ: ನಾಲ್ವರನ್ನು ಅಮಾನುಷವಾಗಿ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.

- Advertisement -

ಹತ್ಯೆಗೊಳಗಾದವರನ್ಬು ಹಸೀನಾ , ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ. ಎಲ್ಲರೂ ಒಂದೇ ಕುಟುಂಬದವರು.

ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Join Whatsapp