ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು

Prasthutha|

ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ.

- Advertisement -


ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತರು. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ ಮಠದ ಸೀತಾ ನದಿಗೆ ಹೋಗಿದ್ದರು. ಈ ವೇಳೆ ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ನೀರು ಪಾಲಾಗಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Join Whatsapp