ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

Prasthutha|

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

- Advertisement -


ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ, ಬೆಂಗಳೂರು ದಕ್ಷಿಣ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ ಆನಂದ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


ವಿಡಿಯೋಗ್ರಫಿ ಮಾಡಿದ 3 ವಿದ್ಯಾರ್ಥಿನಿಯರನ್ನು ಇನ್ನೂ ಬಂಧಿಸಿಲ್ಲ. ಸರಕಾರ ಅವರ ಮೇಲೆ ಎಫ್ಐಲಆರ್ ಮಾಡಲು ಆರಂಭದಲ್ಲಿ ಮೀನಮೇಷ ಎಣಿಸುತ್ತಿತ್ತು ಎಂದು ಟೀಕಿಸಿದರು. ಪ್ರಕರಣದ ಸಿಐಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಯಿತು.



Join Whatsapp