Home ಟಾಪ್ ಸುದ್ದಿಗಳು ಉಡುಪಿ ವೀಡಿಯೊ ಚಿತ್ರೀಕರಣ ಪ್ರಕರಣ: ತನಿಖೆಯನ್ನು CIDಗೆ ಒಪ್ಪಿಸಿದ ರಾಜ್ಯ ಸರಕಾರ

ಉಡುಪಿ ವೀಡಿಯೊ ಚಿತ್ರೀಕರಣ ಪ್ರಕರಣ: ತನಿಖೆಯನ್ನು CIDಗೆ ಒಪ್ಪಿಸಿದ ರಾಜ್ಯ ಸರಕಾರ

ಉಡುಪಿ: ಇಲ್ಲಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.


ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ ವಿದ್ಯಾರ್ಥಿನಿಯೊಬ್ಬಳ ವೀಡಿಯೊ ಚಿತ್ರೀಕರಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವಾರದ ಬಳಿಕ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದರು. ಇದೀಗ ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿದೆ.

Join Whatsapp
Exit mobile version