ಉಡುಪಿ: ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಮಹಿಳೆ ಆತ್ಮಹತ್ಯೆ

Prasthutha|

‌ಮಲ್ಪೆ: ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯ ಕೊಡವೂರು ಗ್ರಾಮದ ಕಾನಂಗಿ ಬಳಿ ನಡೆದಿದೆ.

- Advertisement -

ಬೀನಾ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೀನಾ ಅವರು ನಾಲ್ಕು ವರ್ಷಗಳ ಹಿಂದೆ ನಿತ್ಯಾನಂದ ಎಂಬಾತನನ್ನು ಮದುವೆಯಾಗಿದ್ದರು. ಆದರೆ ಪತಿ ನಿತ್ಯಾನಂದ್ ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ 9 ತಿಂಗಳ ಹಿಂದೆ ಆತ್ಮಹತ್ಯೆ ಶರಣಾಗಿದ್ದರು ಎಂದು ತಿಳಿದು ಬಂದಿದೆ.

- Advertisement -

ಪತಿ ಅಗಲಿಕೆಯ ನಂತರ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಬೀನಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp