ಮಲ್ಪೆ: ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯ ಕೊಡವೂರು ಗ್ರಾಮದ ಕಾನಂಗಿ ಬಳಿ ನಡೆದಿದೆ.
ಬೀನಾ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೀನಾ ಅವರು ನಾಲ್ಕು ವರ್ಷಗಳ ಹಿಂದೆ ನಿತ್ಯಾನಂದ ಎಂಬಾತನನ್ನು ಮದುವೆಯಾಗಿದ್ದರು. ಆದರೆ ಪತಿ ನಿತ್ಯಾನಂದ್ ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ 9 ತಿಂಗಳ ಹಿಂದೆ ಆತ್ಮಹತ್ಯೆ ಶರಣಾಗಿದ್ದರು ಎಂದು ತಿಳಿದು ಬಂದಿದೆ.
ಪತಿ ಅಗಲಿಕೆಯ ನಂತರ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಬೀನಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.