ಉಡುಪಿ: ನಿರುದ್ಯೋಗದಿಂದ ಮನನೊಂದು ಯುವತಿ ಆತ್ಮಹತ್ಯೆ

Prasthutha|

ಉಡುಪಿ: ನಿರುದ್ಯೋಗದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬೈಂದೂರುನಲ್ಲಿ ನಡೆದಿದೆ.

- Advertisement -


ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.


ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp