ಉಡುಪಿ | ಲಾರಿ ಪಲ್ಟಿ, ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ರಕ್ಷಣೆ

Prasthutha|

ಉಡುಪಿ: ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಮಗುಚಿ ಬಿದ್ದ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.

- Advertisement -


ಮಣ್ಣಿನಡಿ ಸಿಲುಕಿದ್ದ ಉಪ್ರಳ್ಳಿ ಮೂಲದ ಆರತಿ ಶೆಟ್ಟಿ ಎಂಬ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಮಣ್ಣು ತುಂಬಿದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಆರತಿ ಅವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಲ್ಲದೇ ಪಲ್ಟಿಯಾಗಿ ಮಗುಚಿ ಬಿದ್ದಿದೆ. ಲಾರಿಯಲ್ಲಿದ್ದ ಮಣ್ಣು ಮಹಿಳೆ ಮೇಲೆ ಬಿದ್ದಿದ್ದರಿಂದ ಸಿಲುಕಿಕೊಂಡಿದ್ದರು. ಸ್ಥಳದಲ್ಲಿದ್ದ ಸಮಾಜ ಸೇವಕ ಕೋಡಿ ಅಶೋಕ ಪೂಜಾರಿ ಎಂಬುವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.




Join Whatsapp