ಕರ್ಫ್ಯೂ ಮಧ್ಯೆಯೂ ಸದ್ದಿಲ್ಲದೆ ಹಸಿದವರಿಗೆ ಮನೆಯಲ್ಲೇ ಊಟ ತಯಾರಿಸಿ ಹಂಚಿದ ಉಡುಪಿಯ ಮಹಿಳೆ !

Prasthutha: April 25, 2021

ಉಡುಪಿ : ವೀಕೆಂಡ್ ಕರ್ಫ್ಯೂ ಎಂದು ಎಲ್ಲರೂ ಬೆಚ್ಚಗೆ ಮನೆಯಲ್ಲಿದ್ದರೆ‌ ಮಹಿಳೆಯೊಬ್ಬರು ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ವಿತರಿಸಿದ್ದಾರೆ. ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಕೋವಿಡ್-19 ಪ್ರಕರಣ ಉಡುಪಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕೇಂಡ್ ಕರ್ಫ್ಯೂವನ್ನು ಸರಕಾರ ವಿಧಿಸಿದೆ. ಆದರೆ ಕಾರ್ಮಿಕರಿಗೆ ಮಾತ್ರ ಸರಿಯಾದ ಊಟದ ವ್ಯವಸ್ಥೆ ಮಾಡಿಲ್ಲ. ಹೊಟೇಲ್, ಡಾಭ ಅವಲಂಬಿತ ಕಾರ್ಮಿಕರನ್ನು ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿ ಮಲಗಬೇಕಾದ ಪರಿಸ್ಥಿತಿ. ಇಂತಹ ಸ್ಥಿತಿಯಲ್ಲಿ ಬೆಳಿಗ್ಗೆ ಪೂರ್ತಿ ಉಪವಾಸವಿದ್ದು ದಣಿದಿದ್ದರೂ ಅದನ್ನು ಲೆಕ್ಕಿಸದೆ ಮಹಿಳೆ ನಿಸ್ವಾರ್ಥವಾಗಿ ಊಟ ತಯಾರಿಸಿ ತಂದು ಹಂಚಿರುವುದು ಮಾನವೀಯ ಕಳಕಳಿಗೆ ಸಾಕ್ಷಿಯಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!