►ನೀರಿಗೆ ಬೀಳುತ್ತಿರುವ ದೃಶ್ಯ ಮೊಬೈಲ್’ನಲ್ಲಿ ಸೆರೆ
ಉಡುಪಿ: ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ,ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಇದರಿಂದ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸಾರ್ವಜನಿಕರಲ್ಲಿ ಮನವಿ ಮಾಡಿವೆ. ಅದ್ಯಾವುದಕ್ಕೂ ಕ್ಯಾರೇ ಎನ್ನದ ಯುವಕನೋರ್ವ ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ.
ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ರೀಲ್ಸ್ ಮಾಡಲು ಹೋಗಿ ಜಾರಿ ಜಲಪಾತಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ಈ ಘಟನೆ ನಡೆದಿದೆ.
ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದೆ.