ಉಡುಪಿ ‘ಸ್ಕಾರ್ಫ್’ ವಿಚಾರ| ಹೈಕೋರ್ಟ್ ಏಕಸದಸ್ಯ ಪೀಠದಿಂದ ವಿಚಾರಣೆ

Prasthutha|

ಬೆಂಗಳೂರು: ಕಾಲೇಜು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಪುರಸ್ಕರಿಸಿದ್ದು, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಲಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

- Advertisement -

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತಮ್ಮ ಧಾರ್ಮಿಕ ಆಚರಣೆಗಳನ್ನು ಪಾಲಿಸುವ ವಿಚಾರದಲ್ಲಿ ಕಾಲೇಜು ಆಡಳಿತ ಮಂಡಳಿ ಮಧ್ಯಪ್ರವೇಶಿಸದಂತೆ ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬಳು ಹೈಕೋರ್ಟ್ ಗೆ ಕಳೆದ ವಾರ ರಿಟ್ ಸಲ್ಲಿಸಿದ್ದರು. ಈ ಕುರಿತು ಇದೀಗ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಪೀಠವು ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಉಡುಪಿ ಸರಕಾರಿ ಪಿಯು ಕಾಲೇಜಿನಲ್ಲಿ ಸ್ಕಾರ್ಫ್ ವಿಚಾರವಾಗಿ ಕಳೆದ ಒಂದು ತಿಂಗಳಿನಿಂದ ತರಗತಿಗೆ ಪ್ರವೇಶ ನಿರಾಕರಿಸಲ್ಪಟ್ಟ ಆರು ವಿದ್ಯಾರ್ಥಿನಿಯರು ತಮ್ಮ ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಟ ಮುಂದುವರೆಸಿದ್ದಾರೆ‌.

Join Whatsapp