ಉಕ್ರೇನ್​ ರಾಕೆಟ್​ ದಾಳಿ| 63 ರಷ್ಯಾ ಸೈನಿಕರು ಸಾವು

Prasthutha|

ಮಾಸ್ಕೋ (ರಷ್ಯಾ): ಉಕ್ರೇನ್​ ನಡೆಸಿದ ರಾಕೆಟ್ ದಾಳಿಯಲ್ಲಿ ರಷ್ಯಾದ 63 ಸೈನಿಕರು ಸಾವನ್ನಪ್ಪಿದ್ದಾರೆ.

- Advertisement -

‘ಡೊನೆಟ್ಸ್ಕ್‌ನ ಮಕಿವ್ಕಾ ಪ್ರದೇಶದಲ್ಲಿ ರಷ್ಯಾದ ಸಶಸ್ತ್ರ ಪಡೆಗಳ ಒಂದು ಘಟಕವನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡುತ್ತಿದ್ದ ಹಂತದಲ್ಲಿ ಉಕ್ರೇನಿಯನ್ ಪಡೆಗಳು ಅಮೆರಿಕ ನಿರ್ಮಿತ ಹಿಮಾರ್ಸ್‌ನ 6 ರಾಕೆಟ್‌ಗಳಿಂದ ದಾಳಿ ಮಾಡಿವೆ. ಇದರಲ್ಲಿ ನಮ್ಮ 63 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಆದಾಗ್ಯೂ ನಾಲ್ಕು ರಾಕೆಟ್​ಗಳನ್ನು ಹೊಡೆದುರುಳಿಸಲಾಗಿದೆ’ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ಸೈನಿಕರನ್ನೇ ಗುರಿಯಾಗಿಸಿಕೊಂಡ ಉಕ್ರೇನ್​ ಶಿಪಿಲೋವ್ಕಾ, ಲಿಮನ್, ಕ್ರೆಮೆನ್ನಾಯಾ, ಪ್ಲೋಶ್ಚಾಂಕಾ, ಚೆರ್ವೊನಾಯಾ ಡಿಬ್ರೊವಾ, ನಿಕೊಲಾಯೆವ್ಕಾ, ಸ್ಕೆಲ್ಕಿ ಪ್ರದೇಶಗಳ ಮೇಲೆ ನಿರಂತರ ರಾಕೆಟ್​ ದಾಳಿ ನಡೆಸಿದೆ. ಇದರಲ್ಲಿ ಡೊನೆಟ್ಸ್ಕ್​ ಪ್ರದೇಶದಲ್ಲಿ ಸೈನಿಕರು ಹತರಾಗಿದ್ದಾರೆ’ ಎಂದು ರಷ್ಯಾ ಹೇಳಿದೆ.

- Advertisement -

ಮತ್ತೊಂದೆಡೆ, ಬೆರಿಸ್ಲಾವ್ ನಗರದಲ್ಲಿ ರಶ್ಯಾ ನಡೆಸಿದ ಶೆಲ್​ ದಾಳಿಯಲ್ಲಿ ಐದು ಉಕ್ರೇನಿಗರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಕ್ರೇನ್​ ತಿಳಿಸಿದೆ.

Join Whatsapp