ಮಂಗಳೂರು: ರೈಲಿನಡಿಗೆ ತಲೆಯಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆ ಮಾಡಿಕೊಂಡ ಯುವಕ.
ಅವಿವಾಹಿತರಾಗಿದ್ದ ಪ್ರಶಾಂತ್ ರವಿವಾರ ಸಂಜೆ ಮನೆಯಿಂದ ಹೊರಟಿದ್ದರು. ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ ಉಚ್ಚಿಲ ರೈಲ್ವೇ ಗೇಟ್‌ವರೆಗೆ ನಡೆದುಕೊಂಡು ತೆರಳಿ ಅಲ್ಲಿ ರೈಲ್ವೇ ಹಳಿಯಲ್ಲಿ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗಳಿಲ್ಲದ ಪ್ರಶಾಂತ್ ಯಾವ ಕಾರಣಕ್ಕೆ ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿಲ್ಲ. ಆತ್ಮಹತ್ಯೆ ಸಂದರ್ಭದಲ್ಲಿ ಕುಡಿದಿರುವ ಮಾಹಿತಿ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.