ಉಳ್ಳಾಲ | ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿದ ASI: ಪ್ರತಿಭಟನೆ

Prasthutha|

ಉಳ್ಳಾಲ: ASIಯೊಬ್ಬರು ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

- Advertisement -


ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಜೆಪ್ಪು ಸಂಚಾರಿ ಠಾಣೆಯ ಎಎಸ್ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

Join Whatsapp