Home ಕರಾವಳಿ ಉಳ್ಳಾಲ | ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿದ ASI: ಪ್ರತಿಭಟನೆ

ಉಳ್ಳಾಲ | ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿದ ASI: ಪ್ರತಿಭಟನೆ

ಉಳ್ಳಾಲ: ASIಯೊಬ್ಬರು ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.


ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಜೆಪ್ಪು ಸಂಚಾರಿ ಠಾಣೆಯ ಎಎಸ್ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

Join Whatsapp
Exit mobile version