ಮಂಗಳೂರು: ಇಬ್ಬರು ಸಿಟಿ ಬಸ್ ನಿರ್ವಾಹಕರು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.
ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ಸನ್ನು ಬೆನ್ನಟ್ಟಿದ ಇನ್ನೊಂದು ಬಸ್ಸು ಚಾಲಕ ಓವರ್ ಬ್ರಿಡ್ಜ್ ಬಸ್ಸು ನಿಲ್ದಾಣದಲ್ಲಿ ಅಡ್ಡಲಾಗಿ ಇಟ್ಟಿದ್ದ. ಈ ವೇಳೆ ಎರಡು ಬಸ್ಸು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದು ಹೊಯ್ ಕೈಯಾಗಿ ಬೀದಿ ಕಾಳಗ ಆಗಿದೆ ಎಂದು ತಿಳಿದುಬಂದಿದೆ.