ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ

Prasthutha|

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷ ಚೇತನ ಯುವತಿಯೋರ್ವಳ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯಲ್ಲಿ ನಡೆದಿದೆ.

- Advertisement -


ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ಮೃತ ಯುವತಿ ಎಂದು ಗುರುತಿಸಲಾಗಿದೆ.


ಸರಿತಾ ವರ್ಮ ಕೊಲ್ಯ ಸಾರಸ್ವತ ಕಾಲನಿಯ ಬಾಡಿಗೆ ಮನೆಯೊಂದರಲ್ಲಿ ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ವಾಸವಿದ್ದರು. ಸೋಮವಾರ ಸಂಜೆ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

- Advertisement -


ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp