ಉಳ್ಳಾಲ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯು ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಮಧ್ಯೆ ಮಂಗಳೂರಿನ ಹೊರ ವಲಯದ ಭಾರತ್ ಪ್ರೌಢ ಶಾಲೆಯ ಆಡಳಿತ ಮಂಡಳಿ ಹಿಜಾಬ್ ಧರಿಸಿ ತರಗತಿಗೆ ಆಗಮಿಸಿದ ವಿದ್ಯಾರ್ಥಿನಿಯರನ್ನು ಶಾಲೆಯ ಗೇಟ್ ನಲ್ಲಿಯೇ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ.
ಎಂದಿನಂತೆ ಹಿಜಾಬ್ ಧರಿಸಿಕೊಂಡು ತರಗತಿಗೆ ಆಗಮಿಸಿದ ಮುಸ್ಲಿಮ್ ವಿದ್ಯಾರ್ಥಿನಿಯರನ್ನು ತಡೆದು ನಿಲ್ಲಿಸಿದ ಆಡಳಿತ ಮಂಡಳಿಯ ನಡೆಯನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಈ ಬೆಳವಣಿಗೆ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಸದ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿಯೊಂದಿಗೆ ಪೋಷಕರು ಮಾತುಕತೆ ಮುಂದಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ.