ಉಳ್ಳಾಲ | ಸಿಡಿಲಿಗೆ ಸುಟ್ಟುಹೋದ ಅಂಗಡಿ

Prasthutha|

ಉಳ್ಳಾಲ: ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ರಾಣಿಪುರದಲ್ಲಿ ಸಂಭವಿಸಿದೆ.

- Advertisement -


ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ ಸಂಭವಿಸಿದೆ.


ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ನಿದ್ರಿಸುತ್ತಿದ್ದರು. ಅಂಗಡಿಗೆ ಬೆಂಕಿ ಬಿದ್ದಿರುವುದನ್ನು ಕಂಡು ದಾರಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಮನೆ ಮಂದಿಗೆ ತಿಳಿಸಿದ್ದಾರೆ.

- Advertisement -


ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.



Join Whatsapp