ಉಳ್ಳಾಲ | ಹಲವು ಅಂಗಡಿಗಳಿಗೆ ನುಗ್ಗಿದ ಕಳ್ಳರು: ನಗದು, ಸೊತ್ತುಗಳು ಕಳವು

Prasthutha|

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.

- Advertisement -


ಅಶ್ರಫ್ , ಕುಲದೀಪ್, ಶ್ರೀಧರ್ ಹಾಗೂ ಮುಹಮ್ಮದ್ , ಶಂಕರ್ ಎಂಬುವವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂಪಾಯಿ ಬೆಲೆಬಾಳುವ ಸಿಗರೇಟ್ ಹಾಗೂ ಡ್ರಾಯರ್’ನಲ್ಲಿದ್ದ ನಗದು ಕದ್ದೊಯ್ದಿದ್ದಾರೆ. ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು ಕಳುವಾಗಿದೆ. ರಾತ್ರಿ ವೇಳೆ ಎಲ್ಲಾ ಅಂಗಡಿಗಳ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ.


ತಡರಾತ್ರಿ ವೇಳೆ ಅನುಮಾನಾಸ್ಪದ ರೀತಿಯಲ್ಲಿ 800 ಕಾರು ತಿರುಗಾಡುತ್ತಿತ್ತು. ತಂಡ ಇದೇ ಕಾರಿನಲ್ಲಿ ಬಂದು ಕೃತ್ಯವೆಸಗಿರುವ ಸಾಧ್ಯತೆಗಳನ್ನು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

Join Whatsapp