ಉಳ್ಳಾಲ : ಸ್ಕೂಟರ್ ನಿಂದ ಬಿದ್ದು ಮಹಿಳೆ ಮೃತ್ಯು

Prasthutha|

ಉಳ್ಳಾಲ: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ನಡೆದಿದೆ.

- Advertisement -

ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ.


ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳಿದವರು, ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆ ಬರುವಾಗ ಈ ಅವಘಡ ಸಂಭವಿಸಿದೆ.

Join Whatsapp
Exit mobile version