ಉಳ್ಳಾಲ: ಎಪ್ರಿಲ್ 17 ಸೋಮವಾರದಂದು ಮಂಗಳೂರು ವಿಧಾನಸಭಾ ಕ್ಷೇತ್ರ SDPI ಚುನಾವಣಾ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು SDPI ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಸಮಿತಿ ಸದಸ್ಯರೂ ಆದ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಉಳ್ಳಾಲ ಮಾಸ್ತಿಕಟ್ಟೆ ಜಂಕ್ಷನ್ ನಿಂದ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಲಿದ್ದಾರೆ, ಬಳಿಕ ರಿಯಾಝ್ ಫರಂಗಿಪೇಟೆಯವರು ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಅಥಾವುಲ್ಲಾ ಜೋಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.