ಉಳ್ಳಾಲ: ಪುತ್ರ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳ ಅಂತರದಲ್ಲಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಮೃತರು.
ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಇವರ ಶವ ಪತ್ತೆಯಾಗಿದೆ.
ಇವರ ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದ. ಬಳಿಕ ಆತ ನ ಮೃತದೇಹ ಜು. 12ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಂತ್ಯಕ್ರಿಯೆ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದರು. ಮಗನ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.