ಉಳ್ಳಾಲ: ಪುತ್ರನ ಆತ್ಮಹತ್ಯೆ ಬೆನ್ನಲ್ಲೇ ತಂದೆಯೂ ಆತ್ಮಹತ್ಯೆ!

Prasthutha|

- Advertisement -

ಉಳ್ಳಾಲ: ಪುತ್ರ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳ ಅಂತರದಲ್ಲಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಮೃತರು.

- Advertisement -

ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಇವರ ಶವ ಪತ್ತೆಯಾಗಿದೆ.

ಇವರ ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದ. ಬಳಿಕ ಆತ ನ ಮೃತದೇಹ ಜು. 12ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಂತ್ಯಕ್ರಿಯೆ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದರು. ಮಗನ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp