ಜೆಎನ್ ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನ

Prasthutha|

ನವದೆಹಲಿ : ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ.

- Advertisement -

ಖಾಲೀದ್ ಅವರಿಗೆ ಭಾನುವಾರ ಲೋದಿ ಕಾಲನಿಯಲ್ಲಿರುವ ವಿಶೇಷ ಘಟಕದ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಶನಿವಾರ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದಕ್ಕೂ ಮೊದಲು ಅವರನ್ನು ಜು.31ರಂದು ವಿಚಾರಣೆ ನಡೆಸಲಾಗಿತ್ತು. ಭಾನುವಾರ ಮಧ್ಯಾಹ್ನ 1 ಗಂಟೆಗೆ ಅವರು ಕಚೇರಿಗೆ ಆಗಮಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಸಂಜೆ ವೇಳೆಗೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿ ಕೋರ್ಟ್ ಗೆ ಇಂದು ಅವರನ್ನು ಹಾಜರುಪಡಿಸಲಾಗುತ್ತದೆ. ಖಾಲೀದ್, ಡ್ಯಾನಿಷ್ ಮತ್ತು ಇತರ ಇಬ್ಬರು ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಭೆಗೆ ಸಂಚು ರೂಪಿಸಿದ್ದರು ಎಂದು ಗುಪ್ತಚರ ಮಾಹಿತಿದಾರರೊಬ್ಬರು ಮಾಹಿತಿ ನೀಡಿರುವುದಾಗಿ, ಪೊಲೀಸರು ಎಫ್ ಐಆರ್ ನಲ್ಲಿ ಆರೋಪಿಸಿದ್ದರು. ಮಾ.6ರಂದು ಖಾಲೀದ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಳು ಮತ್ತು ಜೆಎನ್ ಯು ವಿದ್ಯಾರ್ಥಿ ಹೋರಾಟಗಳಲ್ಲಿ ಖಾಲೀದ್ ಮುಂಚೂಣಿಯಲ್ಲಿದ್ದರು.

Join Whatsapp