ದೆಹಲಿ ಗಲಭೆ: ಉಮರ್ ಖಾಲಿದ್ ರ ಜಾಮೀನು ಅರ್ಜಿ ಜುಲೈ 27 ಕ್ಕೆ ವಿಚಾರಣೆ

Prasthutha|

ನವದೆಹಲಿ ಜುಲೈ15 : ಈಶಾನ್ಯ ದೆಹಲಿ ಗಲಭೆಗೆ ಸಂಚು ಮತ್ತು ಷಡ್ಯಂತ್ರ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ (ಯುಎಪಿಎ) ಬಂಧಿಸಲಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯ ವಿಚಾರಣೆಯು ಜುಲೈ 27 ರಂದು ನಡೆಯಲಿದೆಯೆಂದು ದೆಹಲಿ ನ್ಯಾಯಾಲಯ ಗುರುವಾರ ಸ್ಪಷ್ಟಪಡಿಸಿದೆ.

- Advertisement -

ಈ ಪ್ರಕರಣದಲ್ಲಿ ಖಾಲಿದ್ ಮತ್ತು ಇತರರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 2020 ರಲ್ಲಿ ನಡೆದ ಹಿಂಸಾಚಾರದ “ಮಾಸ್ಟರ್ ಮೈಂಡ್ಸ್” ಎಂದು ಇವರನ್ನು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಮಂದಿ ಬಲಿಯಾಗಿ 700 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಮಾತ್ರವಲ್ಲದೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿನಿ ತನ್ಹಾ ಆಸಿಫ್ ಇಕ್ಬಾಲ್, ಜೆಎನ್ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಾಂಗನ ಕಲಿತಾ, ಜಾಮಿಯಾ ಸಮನ್ವಯ ಸಮಿತಿ ಸದಸ್ಯರಾದ ಸಫೂರಾ ಝರ್ಗರ್, ಮಾಜಿ ಎಎಪಿ ಕೌನ್ಸಿಲರ್ ತಾಹಿರ್ ಹುಸೇನ್ ಮತ್ತು ಇತರರ ವಿರುದ್ಧವೂ ಈ ಪ್ರಕರಣದಲ್ಲಿ ಕಠಿಣ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗೆ, ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ ತನ್ಹಾ, ನರ್ವಾಲ್ ಮತ್ತು ಕಲಿತಾ ಗೆ ಜಾಮೀನು ನೀಡಿತ್ತು, ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ಆತಂಕದಲ್ಲಿ ಪ್ರತಿಭಟಿಸುವ ಹಕ್ಕು ಮತ್ತು ಭಯೋತ್ಪಾದಕ ಚಟುವಟಿಕೆಯ ನಡುವಿನ ರೇಖೆಯನ್ನು ರಾಜ್ಯವು ಮಸುಕಾಗಿಸುತ್ತಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು.

- Advertisement -

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಅಮಿತಾಬ್ ರಾವತ್ ಅವರು ಉಮರ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮರುದಿನ ಪ್ರಾಸಿಕ್ಯೂಷನ್ನಿಂದ ಮಾಹಿತಿ ಕೋರಿದ್ದಾರೆ.
ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ತ್ರಿದೀಪ್ ಪೈಸ್ ಅವರು ನ್ಯಾಯಾಲಯದಲ್ಲಿ ವಾದಿಸುತ್ತಿದ್ದಾರೆ.



Join Whatsapp