ಉಮೇಶ್ ಕತ್ತಿ ನಿಧನ: ಬೆಳಗಾವಿ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ

Prasthutha|

ಬೆಂಗಳೂರು:  ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಇಂದು ಬೆಳಗಾವಿಯ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ನಮ್ಮ ಮತ್ತು ಉಮೇಶ್ ಕತ್ತಿಯವರ ಸಂಬಂದ ನಾಲ್ಕು ದಶಕಗಳದ್ದಾಗಿತ್ತು ಎಂದು ಕಣ್ಣೀರು ಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತಾಡಿ, ಬೆಳಗಾವಿ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದರು. ಕತ್ತಿ ಅವರ ತಂದೆಯವರು ಆಧಿವೇಶನದ ಸಂದರ್ಭದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಇಂದು ಕತ್ತಿಯವರು ಸಹ ಹೃದಯಾಘತದಿಂದ ನಮ್ಮನ್ನು ಅಗಲಿದ್ದಾರೆ. ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ. ಬೆಳಗಾವಿ ಅನಾಥವಾಗಿದೆ ಎಂದು ಹೇಳಿದರು.

ಇದೀಗ  ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗಿದ್ದು, ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ನಡೆಯಲಿದ್ದು, ಸಿಎಂ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ. ಬೆಳಗಾವಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಿದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

Join Whatsapp