ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್ ವಿಳಂಬ: ಸಿದ್ದರಾಮಯ್ಯ, ಮೋದಿ ಸೇರಿ ಹಲವರಿಂದ ಸಂತಾಪ

Prasthutha|

ಬೆಂಗಳೂರು: ಕಳೆದ ರಾತ್ರಿ ನಿಧನರಾದ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ಅವರ ಹುಟ್ಟೂರಿಗೆ ಕೊಂಡೊಯ್ಯಲು ಸಿದ್ಧತೆ ನಡೆಸಲಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ  ಏರ್ ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

ಈಗಾಗಲೇ ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್ ಎಎಲ್ ಏರ್ ಪೋರ್ಟ್ ಗೆ ತಲುಪಿದ್ದು, ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಏರ್ ಲಿಫ್ಟ್ ವಿಳಂಬವಾಗಿದೆ. ಚೆನ್ನೈನಲ್ಲೂ ಇದೇ ಸಮಸ್ಯೆ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಬರಬೇಕಿದ್ದ ವಿಶೇಷ ವಿಮಾನ ಕ್ಯಾನ್ಸಲ್ ಆಗಿ ಹೈದರಾಬಾದ್ ನಿಂದ ವಿಶೇಷ ವಿಮಾನ ಆಗಮಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ರಾಜಕೀಯ ಗಣ್ಯರು ಹೆಚ್ ಎಎಲ್ ಏರ್ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಬಿಸಿ. ಪಾಟೀಲ್, ಸಚಿವ ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆಜೆ ಜಾರ್ಜ್, ಎಮ್.ಟಿ.ಬಿ. ನಾಗರಾಜ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದಿದ್ದಾರೆ.

- Advertisement -

‘ಉಮೇಶ್ ಕತ್ತಿ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಉಮೇಶ ಕತ್ತಿ ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Join Whatsapp