Home ಟಾಪ್ ಸುದ್ದಿಗಳು ಉಮೇಶ್ ಕತ್ತಿ ಮಂತ್ರಿಯಾಗಲು ಯೋಗ್ಯತೆ ಇಲ್ಲ: ಸಿದ್ದರಾಮಯ್ಯ

ಉಮೇಶ್ ಕತ್ತಿ ಮಂತ್ರಿಯಾಗಲು ಯೋಗ್ಯತೆ ಇಲ್ಲ: ಸಿದ್ದರಾಮಯ್ಯ

ಮಂಡ್ಯ: ಉಮೇಶ್ ಕತ್ತಿ ಮಂತ್ರಿ ಆಗಲಿಕ್ಕೆ ಯೋಗ್ಯ ಅಲ್ಲ. ಮಾಸ್ಕ್ ಹಾಕದೆ ಅವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಮಂತ್ರಿಯಾಗಲು ಲಾಯಕ್ಕಾ ಇವರು? ಇವರ ಮೇಲೆ ಸರ್ಕಾರ ಯಾಕೆ ಕೇಸ್ ಹಾಕಿಲ್ಲ.? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಮಂತ್ರಿಯಾಗಿ ಕತ್ತಿ , ಮಾಸ್ಕ್ ಹಾಕದಿರುವವರನ್ನು ಬಿಟ್ಟುಬಿಡಿ, ಕಡ್ಡಾಯ ಮಾಡಬೇಡಿ. ಇಷ್ಟ ಬಂದವರು ಹಾಕ್ತಾರೆ, ಇಷ್ಟ ಇಲ್ಲದವರು ಇರ್ತಾರೆ. ಒತ್ತಾಯ ಮಾಡಬೇಡಿ ಅಂತ ಹೇಳ್ತಾರೆ. ಸರ್ಕಾರ ನಡೆಸಲಿಕ್ಕೆ ಇವರಿಗೆ ಯೋಗ್ಯತೆ ಇದ್ಯಾ ? ಮಂತ್ರಿಯೇ ಮಾಸ್ಕ್ ಹಾಕಲಿಲ್ಲ ಅಂದರೆ ಬೇರೆಯವರು ಏಕೆ ಹಾಕಬೇಕು? ಬೇರೆಯವರಿಗೆ ದಂಡ ಹಾಕ್ತಾರೆ, ಕೇಸ್ ದಾಖಲು ಮಾಡ್ತಾರೆ. ಮಾಸ್ಕ್ ಧರಿಸದ ಮಂತ್ರಿ ಮೇಲೆ ಕೇಸ್ ಹಾಕಬೇಕು ತಾನೆ ಎಂದು ಕೇಳಿದರು.
ನನ್ನ ಪ್ರಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯ ಇಲ್ಲ. ವೀಕೆಂಡ್ ಕರ್ಫ್ಯೂನಿಂದ ಕೊರೋನಾ ತಡೆಗಟ್ಟಲು ಸಾಧ್ಯವಿಲ್ಲ. ಸರ್ಕಾರ ಎಲ್ಲರಿಗೂ ಲಸಿಕೆ ನೀಡಲಿ. ಜನ ಕೊವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಿ. ವೀಕೆಂಡ್ ಕರ್ಫ್ಯೂನಿಂದ ಏನಾಗುತ್ತೆ? ಅದರಿಂದ ಕೊರೋನಾ ತಡೆಗಟ್ಟಲು ಸಾಧ್ಯವಿಲ್ಲ ಎಂದರು.

ಬಿಜೆಪಿಯವರು ಯಾವಾಗಲೂ ಡಬಲ್ ಸ್ಟ್ಯಾಂಡರ್ಡ್ ನವರೇ. ಅವರಿಗೆ ಯಾವ ಸಿಂಗಲ್ ಸ್ಟ್ಯಾಂಡರ್ಡ್ ಇದೆ.? ಅವರು ಯಾವಾಗಲೂ ಹೇಳುವುದು ಒಂದು, ಮಾಡುವುದು ಇನ್ನೊಂದು..ಇವತ್ತು ಕೊರೋನಾ ನಿಯಮಗಳ ಉಲ್ಲಂಘನೆ ಆಗಿದ್ರೆ, ಅದು ಬಿಜೆಪಿಯಿಂದ. ಬಿಜೆಪಿ ಅವರಿಂದಲೇ ಜಾಸ್ತಿ ಉಲ್ಲಂಘನೆಯಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು

Join Whatsapp
Exit mobile version