ನವದೆಹಲಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿಯು ದೇಶದ್ರೋಹದ ಕುರಿತು ಸುಪ್ರೀಂ ಕೋರ್ಟ್ ನ ಆದೇಶವನ್ನು ಸ್ವಾಗತಿಸಿದೆ.
ಶಾಂತಿಯುತ ಟೀಕಾಕಾರರ ವಿರುದ್ಧ ನಿರಂಕುಶ ಮತ್ತು ವ್ಯಾಪಕವಾಗಿ ಬಳಸಲಾದ ಈ ಕಾನೂನನ್ನು ಮರುಪರಿಶೀಲಿಸುವ ಭಾರತೀಯ ಸುಪ್ರೀಂಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಪ್ರಸ್ತುತ ಕಾನೂನಿನಡಿಯಲ್ಲಿ ಬಂಧಿತರಾಗಿರುವ ಎಲ್ಲರನ್ನೂ ತಕ್ಷಣವೇ ಬಿಡುಗಡೆ ಮಾಡುವ ಬಗ್ಗೆ ಸರ್ಕಾರ ಪರಿಗಣಿಸಬೇಕು ಎಂದಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹ ಕಾನೂನನ್ನು ಮರುಪರಿಶೀಲಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿತು.