ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

Prasthutha|

- Advertisement -

ಬೆಂಗಳೂರು: ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಯಾಗಿದೆ.

ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ. 60-40 ಸೈಟ್‌ ಅಳತೆಯಲ್ಲಿ 6 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಿಸಲಾಗ್ತಿತ್ತು. ನಿರ್ಮಾಣಹಂತದ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ 21ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದ್ರೆ ಭಾರಿ ಮಳೆ ಹೊಡೆತಕ್ಕೆ, ಕಳಪೆ ಕಾಮಗಾರಿಯಿಂದ ಕೂಡಿದ್ದ ಕಟ್ಟಡ ನಿನ್ನೆ(ಅಕ್ಟೋಬರ್ 22) ಸಂಜೆ ಏಕಾಏಕಿ ದೊಪ್ಪೆಂದು ಕುಸಿದುಬಿದ್ದಿದೆ.

- Advertisement -

ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್ ಮೃತಪಟ್ಟವರು. ರಾತ್ರಿ ಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆದಿದೆ. ಕಾಮಗಾರಿಯ ವೇಳೆಗೆ 21 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಈಗಾಗಲೇ ಅಗ್ನಿಶಾಮಕ, ಎನ್​​ಡಿಆರ್​ಎಫ್, ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ 13 ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. ಈ ಪೈಕಿ 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.



Join Whatsapp